ಅರಕಲಗೂಡು: ತಾಲ್ಲೂಕಿನ ಮಲ್ಲಿಪಟ್ಟಣ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯೊಬ್ಬನಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಆತನನ್ನು ಹಾಸನದ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳಿಸಿಕೊಡಲಾಗಿದೆ.
ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಈ ವಿದ್ಯಾರ್ಥಿ ಅರಕಲಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಾಲಾಗಿದ್ದು,
ಗುರುವಾರ ಆಸ್ಪತ್ರೆಯಿಂದಲೆ ಪರೀಕ್ಷಾ ಕೆಂದ್ರಕ್ಕೆ ತೆರಳಿ ಪರೀಕ್ಷೆ ಬರೆದಿದ್ದ. ಈತನ ಗಂಟಲ ದ್ರವ ಸಂಗ್ರಹಿಸಿ ಕೊರೋನಾ ಟೆಸ್ಟ್ ಗೆ ಕಳಿಸಲಾಗಿತ್ತು. ಶನಿವಾರವೂ ಪರೀಕ್ಷೆಗೆ ಈತ ಹಾಜರಾಗಿದ್ದ. ಕೊರೋನಾ ಸೋಂಕು ದೃಢಪಟ್ಟ ವರದಿ ಬಂದ ಕೂಡಲೆ ತಹಶೀಲ್ದಾರ್ ವೈ.ಎಂ. ರೇಣುಕುಮಾರ್. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾಮಿಗೌಡ, ಸಿಪಿಐ ದೀಪಕ್, ಬಿಇಒ ಶಿವನಂಜೇಗೌಡ ಪರೀಕ್ಷಾ ಕೇಂದ್ರಕ್ಕೆ ತೆರಳಿ ವಿದ್ಯಾರ್ಥಿಯನ್ನು ಪ್ರತ್ಯೇಕ ಕೋಠಡಿಯಲ್ಲಿ ಕುಳಿತು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದರು. ನಂತರ ಚಿಕಿತ್ಸೆಗಾಗಿ ಹಾಸನದ ಕೋವಿಡ್ ಆಸ್ಪತ್ರೆಗೆ ವಿದ್ಯಾರ್ಥಿಯನ್ನು ಕಳಿಸಲಾಯಿತು. ಈತ ಇದ್ದ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ 18 ವಿದ್ಯಾರ್ಥಿಗಳು ಮತ್ತು ಮೇಲ್ವಿಚಾರಣೆ ಕಾರ್ಯ ನಿರ್ವಹಿದ್ದ ಶಿಕ್ಷಕರ ಗಂಟಲ ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದು ಇವರುಗಳನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ದಾಖಲಾಗಿದ್ದ ವೇಳೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಸಿಬ್ಬಂದಿಯ ಗಂಟಲದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದು ಇವರನ್ನು ಬರಗೂರು ಐಸೋಲೇಶನ್ ಕೇಂದ್ರದಲ್ಲಿ ಇರಿಸಿದ್ದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ ತಿಳಿಸಿದರು.
ವರದಿ: ರವಿಕುಮಾರ್ ದುಮ್ಮಿ ಅರಕಲಗೂಡು
No comments:
Post a Comment