ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ಕೆಪಿಸಿಸಿ ಸಂಯೋಜಕರಾದ ನಟೇಶ್ ಗೌಡ್ರು ಕರೆ

ಅರಕಲಗೂಡು: ತಾಲೂಕಿನ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಜುಲೈ 2ಕ್ಕೆ ಪ್ರತಿಜ್ಞಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಅರಕಲಗೂಡು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಅದೇ ದಿನ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮವನ್ನು ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ವೀಕ್ಷಣೆ ಮಾಡಬೇಕು. ಕಾರ್ಯಕರ್ತರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು  ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಉಸ್ತುವಾರಿಗಳಾದ ಶೇಷೇಗೌಡ, ಅರಕಲಗೂಡು ತಾಲ್ಲೂಕಿನ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ರಾಜೇಂದ್ರ, ಕಾಂಗ್ರೆಸ್‌ನ ಯುವ ಮುಖಂಡ ಜಮೀರ್ ಪಾಷ, ಜಿಲ್ಲಾ ಪಂಚಾಯಿತಿ ಸದಸ್ಯಗಳು ಹಾಜರಿದ್ದರು

ವರದಿ: ಜಮೀರ್ ಅಹಮದ್ ಕೊಣನೂರು

No comments:

Post a Comment