ಕೊಣನೂರು: ಕಳೆದ ಹತ್ತು ದಿನಗಳಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡುತ್ತಿದ್ದು ಇದರಿಂದ ಜನಸಾಮಾನ್ಯರಿಗೆ ದೊಡ್ಡ ಹೊರೆಯಾಗಿದೆ. ಕೊರೋನಾ ವೈರಸ್‌ನಿಂದ ಈಗಾಗಲೇ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತಷ್ಟು ಗಾಯದ ಮೇಲೆ ಬರೆ ಎಳೆದ ಹಾಗೆ ಆಗಿದೆ.
ಮುಂದಿನ ವಾರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟ ಮಾಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲೂ ಸಹ ಪೆಟ್ರೋಲ್ ಮತ್ತು ಡಿಸೇಲ್ ಏರಿಕೆಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಕೆಪಿಸಿಸಿ ಸಂಯೋಜಕರಾದ ಹೇಮ್ ಶೇಖರ್ ತಿಳಿಸಿದರು.
ಅರಕಲಗೂಡು ತಾಲ್ಲೂಕಿನ ಕಾಂಗ್ರೆಸ್ ಉಸ್ತುವಾರಿಗಳಾದ ಎಂ.ಕೆ. ಶೇಷೇಗೌಡ, ತಾಲ್ಲೂಕಿನ ಮುಖಂಡ ಗಶೇಣ್ ವೇಲಾಪುರಿ, ಅರಕಲಗೂಡು ತಾಲ್ಲೂಕಿನ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ರಾಜೇಂದ್ರ, ಅಲ್ಪಸಂಖ್ಯಾತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಾಬಾಜ಼್, ಕಾಂಗ್ರೆಸ್‌ನ ಯುವ ಮುಖಂಡ ಜಮೀರ್ ಪಾಷ, ಯುವ ಮುಖಂಡ ಫಾಜಿಲ್ ಮೊದಲಾದವರು ಉಪಸ್ಥಿತರಿದ್ದರು.
ವರದಿ : ಜಮೀರ್ ಅಹಮದ್ ಕೊಣನೂರು
No comments:
Post a Comment