ಅರಕಲಗೂಡು: ರಸಗೊಬ್ಬರ ಹಾಗೂ ಕೀಟ ನಾಶಕಗಳನ್ನು ನಿಗದಿತ ಬೆಲೆಗೆ ದೊರಕಿಸಿಕೊಡುವ ಮೂಲಕ ಕೃಷಿ ಇಲಾಖೆ ರೈತರ ನರವಿಗೆ ಬರುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹಿಸಿದೆ.
ತಾಲ್ಲೂಕಿನಲ್ಲಿ ಕೃಷಿ ಕಾರ್ಯ ಚುರುಕುಗೊಂಡಿದೆ. ರೈತರಿಗೆ ಅಗತ್ಯವಾದ ರಸಗೊಬ್ಬರ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ಕಳಪೆ ಗುಣಮಟ್ಟದ ಕೀಟ ನಾಶಕಗಳನ್ನು ನೀಡುತ್ತಿರುವ ಕುರಿತು ವ್ಯಾಪಕ ದೂರುಗಳು ಕೇಳಿಬರುತ್ತಿದ್ದು ಕೂಡಲೆ ಈ ಕುರಿತು ಗಮನಹರಿಸಿ ರೈತರಿಗೆ ವಂಚನೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಶಶಿಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ದರ್ಶನ್, ಮುಖಂಡರಾದ ಗಗನ್, ಅಕ್ಷಯ್,ಕಿರಣ್, ಭರತ್ ಬುಧವಾರ ಸಹಾಯಕ ಕೃಷಿ ನಿರ್ದೇಶಕ ರಮೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ವರದಿ: ರವಿಕುಮಾರ್ ದುಮ್ಮಿ ಅರಕಲಗೂಡು
No comments:
Post a Comment