ಆಗಸ್ಟ್ ಮೊದಲ ವಾರ ಎಸ್ಸೆಸ್ಸೆಲ್ಸಿ ಫಲಿತಾಂಶ: ಸುರೇಶ್ ಕುಮಾರ್

ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

 _ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿ  ಮಾತನಾಡಿದ ಸಚಿವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ ಎಂದರು.

_ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ._
 _ಇನ್ನು 10 ದಿನಗಳಲ್ಲಿ ರಾಜ್ಯದ ಎಲ್ಲ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, 8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ಆಲೋಚನೆ ಹೊಂದಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

No comments:

Post a Comment